Mangalore and Udupi news
Blog

ಉಡುಪಿ: ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ : 3 ಜನ ಶಿಕ್ಷಕರ ಅಮಾನತು….!!

ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಗಣತಿದಾರರಾಗಿ ಸಹ ಶಿಕ್ಷಕರಾದ ಸುರೇಖ, ರತ್ನ , ಪ್ರಭಾ ಬಿ ರವರನ್ನು ನೇಮಕ ಮಾಡಿ ಆದೇಶ ಮಾಡಲಾಗಿತ್ತು. ಆದರೆ ಇವರು ನೇಮಕಾತಿ ಆದೇಶವನ್ನು ಸ್ವೀಕರಿಸಿಲ್ಲ. ಹಲವು ಬಾರಿ ದೂರವಾಣಿ ಮೂಲಕ ಸಂಪರ್ಕಿಸಿದರೂ ನೇಮಕಾತಿ ಆದೇಶ ಪ್ರತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ಈ ಮೂವರು ಶಿಕ್ಷಕಿಯರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು ಈವರೆಗೂ ನೋಟಿಸ್ ಗೆ ಉತ್ತರ ನೀಡಿಲ್ಲ. ಈ ಕಾರಣದಿಂದಾಗಿ ಸಮೀಕ್ಷೆದಾರರನ್ನು ಅ.4 ರಂದು ಅಮಾನತ್ತಿನಲ್ಲಿರಿಸಿ ಆದೇಶಿಸಲಾಗಿದೆ. ಇದೇ ರೀತಿ ಸಮೀಕ್ಷೆ ಕಾರ್ಯದಲ್ಲಿ ಸಮೀಕ್ಷೆದಾರರು ನಿರ್ಲಕ್ಷ್ಯ ತೋರಿದರೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

Related posts

Leave a Comment