ತುಮಕೂರು : ತುಮಕೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ತುಮಕೂರು ತಾಲೂಕಿನ ಬೆಳಧರ ಗೇಟ್ ಬಳಿ ದುರಂತ ಸಂಭವಿಸಿದ್ದು, ತುಮಕೂರಿನಿಂದ ಪಾವಗಡಕ್ಕೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಧರ್ಮಸ್ಥಳಕ್ಕೆ ತೆರಳುತ್ತಿದ್ದವರ ಕಾರಿಗೆ ಢಿಕ್ಕಿ ಹೊಡೆದಿದೆ.
ಅದರ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಮೃತಪಟ್ಟ ಕತ್ತಿನಾಗೇನಹಳ್ಳಿಯ ಶಿವಕುಮಾರ್ (28), ಬೈಚಾಪುರದ ಶಿವಶಂಕರ್ (28) ಹಾಗೂ ಗೋವಿಂದಪ್ಪ (60) ಎಂದು ತಿಳಿಯಲಾಗಿದೆ. ಇನ್ನು, ರೆಡ್ಡಿಹಳ್ಳಿಯ ಶಂಕರ್ ಹಾಗೂ ಕತ್ತಿನಾಗೇನಹಳ್ಳಿಯ ವೇಣುಗೋಪಾಲ್ ಗಂಭೀರ ಗಾಯಗೊಂಡಿದ್ದಾರೆ
ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.