Mangalore and Udupi news
Blog

ಸುಳ್ಯ: ರಸ್ತೆ ಅಪಘಾತ; ಬೈಕ್‌ ಸವಾರ ಮೃತ್ಯು

ಸುಳ್ಯ: ಸುಳ್ಯ ನಗರದ ನಾಗಪಟ್ಟಣ ಎಂಬಲ್ಲಿ ದೋಸ್ತ್ ವಾಹನ ಹಾಗೂ ಬುಲೆಟ್ ಬೈಕ್ ನಡುವಿನ ಅಪಘಾತದಲ್ಲಿ ಬುಲೆಟ್ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.

ಮೃತಪಟ್ಟವರು ಕೇರಳ ಕಲ್ಲಪಳ್ಳಿಯ ಮೂಲೆಹಿತ್ತು ನಿವಾಸಿ ಕೃಷಿಕರಾಗಿದ್ದ ಪ್ರದೀಪ್ (40) ಎಂದು ತಿಳಿದು ಬಂದಿದೆ.

ಸುಳ್ಯದಿಂದ ಕಲ್ಲಪಳ್ಳಿ ಕಡೆಗೆ ಹೋಗುತ್ತಿದ್ದ ಬುಲೆಟ್ ಬೈಕ್‌ ಹಾಗೂ ಸುಳ್ಯ ಕಡೆಗೆ ಬರುತ್ತಿದ್ದ ದೋಸ್ತ್ ವಾಹನದ ನಡುವೆ ಸುಳ್ಯ-ಆಲೆಟ್ಟಿ ರಸ್ತೆಯ ನಾಗಪಟ್ಟಣ ಸೇತುವೆ ಬಳಿ ಮುಖಾಮುಖಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಬುಲೆಟ್ ಸವಾರ ಪ್ರದೀಪ್‌ ಅವರನ್ನು ಸುಳ್ಯದ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Comment