Mangalore and Udupi news
Blog

ಉಡುಪಿ: ಬ್ಯೂಟಿ ಪಾರ್ಲರ್ ನಲ್ಲಿ ಬೆಂಕಿ

ಉಡುಪಿ: ನ್ಯಾಯಾಲಯ ಸಂಕೀರ್ಣದ ಮುಂಭಾಗದಲ್ಲಿರುವ ಕಟ್ಟಡವೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಶುಕ್ರವಾರ ವರದಿಯಾಗಿದೆ.

ಕಟ್ಟಡದ ಎರಡನೇ ಮಹಡಿಯಲ್ಲಿರುವ ಬ್ಯೂಟಿಪಾರ್ಲರ್ ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಬ್ಯೂಟಿ ಪಾರ್ಲರ್ ನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.

ಬೆಂಕಿಯಿಂದಾಗಿ ಕಟ್ಟಡದ ಸುತ್ತಲೂ ದಟ್ಟ ಹೊಗೆ ಆವರಿಸಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ತಿಳಿದು ಬಂದಿದೆ.

Related posts

Leave a Comment