ಸುಳ್ಯ: ಮಾರಿಷಸ್ ನಲ್ಲಿ ಶಿಕ್ಷಣ ಪಡೆಯುತ್ತಿರುವ ಸುಳ್ಯ ತಾಲೂಕಿನ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ.ಮೃತಪಟ್ಟ ಯುವಕ ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ್ ಎಸ್. ಭಟ್ (25) ಎಂದು ತಿಳಿದು ಬಂದಿದೆ.

ನಂದನ್ ಮಾರಿಷಸ್ ದೇಶದಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು, ಸೋಮವಾರ ಅಲ್ಲಿ ಜಲಪಾತ ವೀಕ್ಷಣೆಗೆ ಹೋಗಿದ್ದ ವೇಳೆ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.
ನಂದನ್ ಮಾರಿಷಸ್‌ನಲ್ಲಿ ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ ಆ್ಯಂಡ್ ಟೂರಿಸಮ್ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

