Mangalore and Udupi news
Blog

ಭಟ್ಕಳ : ಸ್ಕೂಟರ್‌ಗೆ ಲಾರಿ ಢಿಕ್ಕಿ : ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು…!!

ಭಟ್ಕಳ: ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದು ಸವಾರ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅ. 15 ರಂದು ಬುಧವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಭಟ್ಕಳದ ತೆಂಗಿನಗುಂಡಿ ಕ್ರಾಸ್ ಬಳಿ ಸಂಭವಿಸಿದೆ.

ಫಿರ್ದೌಸ್ ನಗರದ ನಿವಾಸಿ ಅನೀಸ್ ಮೊಹ್ತಿಶಾಮ್ ಅವರ ಪುತ್ರ ಮೊಹ್ತಿಶಾಮ್ (18) ಮೃತಪಟ್ಟ ಸ್ಕೂಟರ್ ಸವಾರ.

ಪ್ಲೈವುಡ್ ತುಂಬಿದ ಲಾರಿಯೊಂದು ಕೇರಳದಿಂದ ಮುಂಬೈಗೆ ತೆರಳುತ್ತಿದ್ದಾಗ ತೆಂಗಿನಗುಂಡಿ ಕ್ರಾಸ್‌ನಿಂದ ರಾಷ್ಟ್ರೀಯ ಹೆದ್ದಾರಿಗೆ ಬರುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಪರಿಣಾಮ ಸ್ಕೂಟರ್ ಸವಾರ ಲಾರಿ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಮೊಹಮ್ಮದ್ ಮೊಹ್ತಿಶಾಮ್ ಅದೇ ಪ್ರದೇಶದಲ್ಲಿರುವ ಅಲಿ ಪಬ್ಲಿಕ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದರು ಎಂದು ತಿಳಿದು ಬಂದಿದೆ.

ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು. ಭಟ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Comment