ಕನಕಪುರ’ ಲಾರಿ-ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು ಮತ್ತಿಬ್ಬರು ಸ್ಥಿತಿ ಗಂಭೀರಗೊಂಡ ಘಟನೆ ಅ.22ರ ಬುಧವಾರ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಹೊನ್ನಿಗನಹಳ್ಳಿಯಲ್ಲಿ ನಡೆದಿದೆ.
ಮಳವಳ್ಳಿ ಮುಖ್ಯರಸ್ತೆಯಲ್ಲಿ ದುರ್ಘಟನೆ ನಡೆದಿದ್ದು, ಇಬ್ಬರು ಮೃತಪಟ್ಟು, ಮತ್ತಿಬ್ಬರು ಸೇರಿ ಒಟ್ಟು ನಾಲ್ಕು ಜನ ಯುವಕರು ಇದ್ದರು. ಇವರು ಬೆಂಗಳೂರು ಮೂಲದವರಾಗಿದ್ದು, ಹಬ್ಬದ ಪ್ರಯುಕ್ತ ಪ್ರವಾಸಕ್ಕೆ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇಬ್ಬರ ಮೃತದೇಹಗಳನ್ನು ಹಾರೋಹಳ್ಳಿ ಬಳಿಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಮತ್ತಿಬ್ಬರಿಗೆ ಚಿಕಿತ್ಸೆ ಮುಂದುವರೆದಿದೆ.
ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


