Mangalore and Udupi news
Blog

ತಡೆಗೋಡೆಗೆ ಕಾರು ಡಿಕ್ಕಿ: ಯುವಕ ಸ್ಥಳದಲ್ಲೇ ಮೃತ್ಯು

ಸುಬ್ರಹ್ಮಣ್ಯ: ಬುಧವಾರ ಮುಂಜಾನೆ ಸಂಭವಿಸಿದ ಕಾರು ಅಪಘಾತದಲ್ಲಿ ಹಾಸನ ಜಿಲ್ಲೆಯ ಹೊಳೆನರಸೀಪುರದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುಂಡ್ಯ ಸಮೀಪದ ಅಡ್ಡಹೊಳೆಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ನಡೆದಿದೆ.

ಮೃತ ಯುವಕ ಹಾಸನ ತಾಲೂಕಿನ ಹೊಳೆನರಸೀಪುರದ ಸಂಜಯ್ (25) ಎಂದು ತಿಳಿದು ಬಂದಿದೆ.ಅಪಘಾತ ಸಂಭವಿಸಿದ ವೇಳೆ ಕಾರಿನಲ್ಲಿ ಚಾಲಕ ಸೇರಿ ಒಟ್ಟು ನಾಲ್ವರು ಇದ್ದರು. ಅರಕಲಗೂಡಿನ ಚಾಲಕ ಸಂದೀಪ್ ಹಾಗೂ ಶೇಷ, ಮಹೇಶ್ ಎಂದು ಗುರುತಿಸಲಾಗಿದೆ. ಉಳಿದ ಮೂವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಕಾರು ಚಾಲಕರಾಗಿದ್ದ ಸಂಜಯ್, ದೀಪಾವಳಿ ಹಬ್ಬದ ಪ್ರಯುಕ್ತ ತೋಟದಲ್ಲಿ ಬೆಳೆದ ಹೂಗಳನ್ನು ಮಾರಾಟ ಮಾಡಲು ಉಡುಪಿ ಕಡೆಗೆ ಬಂದಿದ್ದರು. ಹೂವಿನ ಮಾರಾಟ ಮುಗಿಸಿ ಉಡುಪಿಯಿಂದ ಸ್ವಗ್ರಾಮದತ್ತ ಕಾರಿನಲ್ಲಿ ಮರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.ಗುಂಡ್ಯ ಸಮೀಪದ ಅಡ್ಡಹೊಳೆಯ ಬಳಿ ಕಾರು ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಅಯ್ಯಪ್ಪಸ್ವಾಮಿ ದೇವಾಲಯದ ಸಮೀಪದಲ್ಲಿರುವ ಹೆದ್ದಾರಿ ತಡೆಗೋಡೆಗೆ ಬಲವಾಗಿ ಡಿಕ್ಕಿಯಾಗಿದೆ. ಕಾರಿನ ಎಡಭಾಗದಲ್ಲಿ ಕುಳಿತಿದ್ದ ಸಂಜಯ್ ಅವರ ತಲೆಯ ಭಾಗ ತಡೆಗೋಡೆಗೆ ಬಲವಾಗಿ ಅಪ್ಪಳಿಸಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತ ಸಂಭವಿಸಿದ ವೇಳೆ ಕಾರಿನಲ್ಲಿ ಚಾಲಕ ಸೇರಿ ಒಟ್ಟು ನಾಲ್ವರು ಇದ್ದರು. ಉಳಿದ ಮೂವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Related posts

Leave a Comment