Mangalore and Udupi news
Blog

ಕಾರ್ಕಳ : ಅಕ್ರಮ ಕಲ್ಲು ಗಣಿಗಾರಿಕೆಗೆ ದಾಳಿ…!!

ಕಾರ್ಕಳ: ಎರ್ಲಪಾಡಿ ಗ್ರಾಮದ ಜಾರ್ಕಳ ಎಂಬಲ್ಲಿನ ಸರಕಾರಿ ಸ್ಥಳದಲ್ಲಿ ಅಕ್ರಮವಾಗಿ ಗಣಿಕಾರಿಕೆ ನಡೆಸುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ಕಾರ್ಕಳ ನಗರ ಪೊಲೀಸ್ ಉಪನಿರೀಕ್ಷಕ ಮುರಳೀಧರ ನಾಯ್ಕ ಸಿಬ್ಬಂದಿಯೊಂದಿಗೆ ಅ. 22ರಂದು ದಾಳಿ ನಡೆಸಿದ್ದಾರೆ.

ಈ ವೇಳೆ ಸುಮಾರು 9,500 ರೂ. ಮೌಲ್ಯದ 800 ಸೈಜು ಶಿಲೆ ಕಲ್ಲುಗಳನ್ನು ಅಕ್ರಮವಾಗಿ ಸಂಗ್ರಹ ಮಾಡಿರುವುದು ಗಮನಕ್ಕೆ ಬಂದಿರುತ್ತದೆ.

ಈ ಕುರಿತು ಆಪಾದಿತ ರಾಜೇಶ ಶೆಟ್ಟಿ ಯಾವುದೇ ಪರವಾನಿಗೆ ಹೊಂದದೇ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವುದಾಗಿ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

Leave a Comment