ಚಿಕ್ಕಬಳ್ಳಾಪುರ : ಬೈಕ್ ಹಾಗೂ ಶಾಲಾ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತಲ್ಲಿ ಮೂವರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬುರುಡುಗುಂಟೆ ಬಳಿ ಈ ಅಪಘಾತ ಸಂಭವಿಸಿದೆ.
ಒಂದೇ ಬೈಕ್ ನಲ್ಲಿ ಮೂವರು ಮಕ್ಕಳು ಸೇರಿ ಐವರು ಪ್ರಯಾಣಿಸುತ್ತಿದ್ದರು. ಈ ವೇಳೆ ಬೈಕ್ ಹಾಗೂ ಶಾಲಾ ವಾಹನ ಡಿಕ್ಕಿ ಹೊಡೆದಿದೆ.
ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಮಕ್ಕಳು ಹಾಗೂ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

