Mangalore and Udupi news
Blog

ಮಂಗಳೂರು: ಪಟಾಕಿ ಅಂಗಡಿಗಳಿಂದ ಬೆದರಿಸಿ ಸುಲಿಗೆ, ಇಬ್ಬರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಪಟಾಕಿ ಅಂಗಡಿಗಳಿಗೆ ಹೋಗಿ ಅಲ್ಲಿದ್ದವರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್, ಕಳವಾರು ನಿವಾಸಿ ರೌಡಿ ಶೀಟರ್ ಪ್ರಶಾಂತ್ ಯಾನೆ ಪಚ್ಚು ಮತ್ತು ಅಶ್ವಿತ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.ಆರೋಪಿಗಳು ಬಜ್ಜೆಯ ಪಟಾಕಿ ಮಾರಾಟ ಮಳಿಗೆಗಳಿಗೆ ತೆರಳಿ,ನಾವು ಹಣ ಕೊಡುವುದಿಲ್ಲ ಆದರೆ ಪಟಾಕಿ ಕೊಡಲೇಬೇಕು ಎಂದು ಬೆದರಿಸಿ ಸುಲಿಗೆ ಮಾಡಿದ್ದಾರೆ. ಈ ಘಟನೆ ಅ.22ರಂದು ನಡೆದಿದ್ದು, ಪಟಾಕಿ ಅಂಗಡಿಗಳ ಮಾಲಕರು ಹೆದರಿ ಪೊಲೀಸ್ ದೂರು ನೀಡಲು ಹಿಂದೇಟು ಹಾಕಿದ್ದರು.

ಇತ್ತೀಚೆಗೆ ವಿಚಾರ ತಿಳಿದು ಪೊಲೀಸರು ರಕ್ಷಣೆ ನೀಡುವ ಭರವಸೆ ನೀಡಿದ ಬಳಿಕ ಪಟಾಕಿ ಅಂಗಡಿಯೊಂದರ ಮಾಲಕ ದಾಮೋದರ ಎಂಬವರು ಬಜ್ಜೆ ಪೊಲೀಸ್ ಠಾಣೆಯಲ್ಲಿ ಗುರುವಾರ ರಾತ್ರಿ ದೂರು ದಾಖಲಿಸಿದ್ದರು.ಈ ದೂರನ್ನು ಆಧರಿಸಿ ಪ್ರಕರಣ ದಾಖಲಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ. ರೌಡಿ ಶೀಟರ್ ಪ್ರಶಾಂತ್ ಇತ್ತೀಚೆಗೆ ಕೊಲೆಯಾದ ರೌಡಿ ಶೀಟರ್ ಸುಹಾಸ್ ಶೆಟ್ಟಿಯ ಆಪ್ತ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Related posts

Leave a Comment