Mangalore and Udupi news
Blog

ಲಾರಿ- ಕಾರು ನಡುವೆ ಭೀಕರ ಅಪಘಾತ: ಇಬ್ಬರು ಮೃತ್ಯು, ಮೂವರು ಗಂಭೀರ

ನೆಲಮಂಗಲ: ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಲಾರಿ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಸಂಭವಿಸಿದೆ.

ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ ಬರುತ್ತಿದ್ದ ಮಾರುತಿ ಎರ್ಟಿಗಾ ಕಾರಿಗೆ ಮುಂದೆ ಚಲಿಸುತ್ತಿದ್ದ ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮೃತರನ್ನು ಶಿವಲಿಂಗ ಗೌಡ(60), ಪ್ರಮೀಳಾ (55) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಕುಟುಂಬ ಸದಸ್ಯರು ಬೆಂಗಳೂರಿನ ನಾರಾಯಣ ಆಸ್ಪತ್ರೆಗೆ ಬರುತ್ತಿದ್ದರು.

ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ. ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

Leave a Comment