Mangalore and Udupi news
Blog

ಪಾಲಡ್ಕದಲ್ಲಿ ಮಹಿಳೆಗೆ ಕತ್ತಿಯಿಂದ ಇರಿದ ಯುವಕ: ಮಹಿಳೆ ಸ್ಥಿತಿ ಗಂಭೀರ, ಆರೋಪಿ ಬಂಧನ

ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತ್‌ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದ ಘಟನೆ ಇಂದು (ಅ.25) ಶನಿವಾರ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಹಿಳೆ ಸ್ಥಿತಿ ಗಂಭೀರವಾಗಿದೆ.
ಘಟನೆಯಲ್ಲಿ ಗಾಯಗೊಂಡ ಮಹಿಳೆ ವರ್ಣಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ದ ಕಾರ್ಯದರ್ಶಿ, ಕೆರೆಕೋಡಿ ನಿವಾಸಿ ನವೀನ್ ಅವರ ಪತ್ನಿ ಸಂಜೀವಿ (ನಯನಾ ನಾಯ್ಕ್) ಎಂದು ಗುರುತಿಸಲಾಗಿದೆ. ಅವರ ತಲೆ, ಕೈ ಮತ್ತು ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ರಾಮ್ ಮೋಹನ ನಗರ ನಿವಾಸಿ ರಾಜೇಶ್ ನಾಯ್ಕ್ ಎಂಬ ಯುವಕ ಈ ಕೃತ್ಯ ಎಸಗಿದ್ದಾನೆ.
ಘಟನಾ ಸ್ಥಳಕ್ಕೆ ತಕ್ಷಣ ಆಗಮಿಸಿದ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಅವರು ಆರೋಪಿ ರಾಜೇಶ್ ನಾಯ್ಕ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Related posts

Leave a Comment