ಉಡುಪಿ: ನಿಟ್ಟೂರು ಕೆಎಸ್ ಆರ್ ಟಿಸಿ ಡಿಪೋ ಬಳಿ ಭಾನುವಾರ ರಾತ್ರಿ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರೆ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಎಂಬಿಎ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಸಹ ಸವಾರೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಿರ್ವ ಪೊಲೀಸ್ ಠಾಣಾ ಎಎಸ್ಸೈ ಸುದೇಶ್ ಶೆಟ್ಟಿ ಅವರ ಮಗಳು ಸ್ಪರ್ಶಾ (24) ಮೃತರು. ತಾಯಿ ಶರ್ಮಿಳಾ (49) ಜೊತೆಗೆ ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ರಾಕೇಶ್ ಎಂಬಾತ ಕಾರನ್ನು ಅತೀವೇಗದಲ್ಲಿ ಚಲಾಯಿಸಿಕೊಂಡು ಬಂದು ಹಿಂದಿನಿಂದ ಬೈಕ್ಗೆ ಡಿಕ್ಕಿ ಹೊಡೆದಿದ್ದ. ಇದರಿಂದ ಸ್ಪರ್ಶಾ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಬಳಿಕ ಇಬ್ಬರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಲಕಾರಿಯಾಗದೆ ಸೋಮವಾರ ಸ್ಪರ್ಶಾ ಮೃತಪಟ್ಟಿದ್ದಾರೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

