ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪ ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಗೋವಾದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಒಂದು ಕೋಟಿ ಹಣ ಹಾಗೂ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ-ಗೋವಾ ಗಡಿಯ ಮಾಜಾಳಿ ಚಕ್ ಪೋಸ್ಟ್ ಬಳಿ ಸಂಭವಿಸಿದೆ.
ಗೋವಾದಿಂದ ಬೆಂಗಳೂರಿನ ಹೊಸೂರಿಗೆ 1 ಕೋಟಿ ಹಣವನ್ನು ಸಾಗಾಟ ಮಾಡಲಾಗುತ್ತಿತ್ತು. ಚೆಕ್‌ಪೋಸ್ಟ್ ಬಳಿ ಪೊಲೀಸರು ತಪಾಸಣೆ ನಡೆಸುವ ವೇಳೆ ಚೀಲದಲ್ಲಿ ಹಣ ಪತ್ತೆಯಾಗಿದೆ. ಹಣದ ಸಂಬಂಧ ದಾಖಲೆ ಕೇಳಿದಾಗ ನೀಡದ ಕಾರಣ ಬೆಂಗಳೂರು ಮೂಲದ ಕಲ್ಪೇಶ, ರಾಜಸ್ಥಾನ ಮೂಲದ ಬಮರ ರಾಮ್ ಎಂಬ ಇಬ್ಬರನ್ನು ವಶಕ್ಕೆ ಪಡೆದು ತನಿಖೆ ಕೈಕೊಳ್ಳಲಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಬೆಂಗಳೂರಿನ ಕಲ್ಪೇಶ್ ಹಾಗೂ ಬಮರ ರಾಮ್ ಗೋವಾದ ಬೇರೆಯೊಬ್ಬರ ಹಣವನ್ನು ವ್ಯವಹಾರಕ್ಕಾಗಿ ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ಹೇಳಿದ್ದಾನೆ. ಆದರೆ ಈ ಹಣದ ಮೂಲ ದಾಖಲೆಗಳನ್ನು ಪೊಲೀಸರು ಕೇಳಿದಾಗ ನೀಡಿಲ್ಲ. ಚಿತ್ತಾಕುಲ ಪೊಲೀಸರು ಹಣವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ

