ಪುತ್ತೂರು: ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಓರ್ವನನ್ನು ಬೆಳ್ಳಾರೆ ಠಾಣಾ ಪೊಲೀಸರು ಬಂಧಿಸಿದ್ದಾರೆ.ಅ.26ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಮುರುಳ್ಯ ಗ್ರಾಮದ ನಿಂತಿಕಲ್ಲು ಜಂಕ್ಷನ್‌ನಲ್ಲಿ ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಗಿರಿಧರ ರೈ ಎಂಬಾತನ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 45/2025 ಕಲಂ: 75 ಬಿ ಎನ್ ಎಸ್ ಮತ್ತು ಕಲಂ 8 12 ಪೋಕ್ಸೋ ಕಾಯ್ದೆ 2012 ರಂತೆ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

