ಬೆಳ್ತಂಗಡಿ: ಉಜಿರೆ-ಧರ್ಮಸ್ಥಳ ರಸ್ತೆಯ ಕನ್ಯಾಡಿ ಸೇವಾಧಾಮದ ಬಳಿ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.

ಮೃತ ಬೈಕ್ ಸವಾರನನ್ನು ನಾವೂರು ಗ್ರಾಮದ ಹೊಡಿಕ್ಕಾರು ಚಂದ್ರಹಾಸ (28) ಎಂದು ಗುರುತಿಸಲಾಗಿದೆ.
ಚಂದ್ರಹಾಸ ತನ್ನ ಬೈಕ್‌ನಲ್ಲಿ ಸತೀಶ್ ಎಂಬವರ ಜೊತೆ ಬೆಳಗ್ಗೆ ಧರ್ಮಸ್ಥಳ ಕಡೆ ಕೆಲಸಕ್ಕಾಗಿ ಹೋಗುತ್ತಿರುವ ಸಂದರ್ಭ ಸೇವಾಧಾಮದ ಬಳಿ ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ನಿಂದ ರಸ್ತೆಗೆ ಎಸೆಯಲ್ಪಟ್ಟ ಚಂದ್ರಹಾಸ್ ಗಂಭೀರ ಗಾಯಗೊಂಡಿದ್ದರು ಎಂದು ತಿಳಿದು ಬಂದಿದೆ.ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

