Mangalore and Udupi news
Blog

ಉಡುಪಿ: ದ್ವಿಚಕ್ರ ವಾಹನ ಡಿಕ್ಕಿ; ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು

ಉಡುಪಿ: ದ್ವಿಚಕ್ರ ವಾಹನವೊಂದು ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಪಾದಾಚಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ ಎಂಜಿಎಂ ಕಾಲೇಜು ಬಳಿ ಗುರುವಾರ ಸಂಜೆ ನಡೆದಿದೆ.

ಮೃತರನ್ನು ಮೂಲತ: ಬಾಗಲಕೋಟೆ ಜಿಲ್ಲೆಯವರಾಗಿದ್ದು, ಸದ್ಯ ಎಂಜಿಎಂ ಕಾಲೇಜು ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ರಂಗಪ್ಪ (62) ಎಂದು ಗುರುತಿಸಲಾಗಿದೆ.

ಇವರು ರಸ್ತೆ ದಾಟಲು ಎಂಜಿಎಂ ಕಾಲೇಜು ಎದುರು ರಸ್ತೆ ಬದಿಯಲ್ಲಿ ನಿಂತಿದ್ದಾಗ ಉಡುಪಿ ಕಡೆಯಿಂದ ಮಣಿಪಾಲದತ್ತ ವೇಗವಾಗಿ ಧಾವಿಸುತ್ತಿದ್ದ ಬೈಕೊಂದು ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಘಟನೆಯಿಂದ ರಂಗಪ್ಪ ಅವರ ತಲೆ, ಬಲಗಾಲು ಹಾಗೂ ಬಲಕೈಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಂಗಪ್ಪ ರಾತ್ರಿ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Comment