Mangalore and Udupi news
Blog

ಮಂಗಳೂರು: ಡಿವೈಡ‌ರ್ ಏರಿದ ಬಸ್

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಸಿಟಿ ಬಷ್ಟೊಂದು ರಸ್ತೆಯ ಡಿವೈಡರ್ ಮೇಲೇರಿದ ಘಟನೆ ನಗರದ ಕೊಟ್ಟಾರದ ಬಳಿ ನಡೆದಿದೆ.

ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ಬಸ್‌ ಚಲಾಯಿಸುತ್ತಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಸಂಚಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಘಟನೆಯಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.

Related posts

Leave a Comment