ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸುತ್ತಿರುವುದು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು ಇದೀಗ ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲೇ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಈ ಕುರಿತು ಮಾಹಿತಿ ನೀಡಿದ್ದು ತನ್ನ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿತ್ತು ಹಾಕಲಿ ಖಾತೆಯಲ್ಲಿ ಕಚೇರಿಯಲ್ಲಿ ಕುಳಿತಿರುವ ಪ್ರೊಫೈಲ್ ಫೋಟೋ ಮತ್ತು ಹಿಂದಿನ ಕಮಿಷನರ್ ಅಧಿಕಾರ ಹಸ್ತಾಂತರ ಮಾಡುವ ವಾಲ್ ಪೇಪರ್ ಹಾಕಿದ್ದು ಇದು ಸೈಬರ್ ವಂಚಕರ ಕೃತ್ಯವಾಗಿದೆ. ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರೆದಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.

