Mangalore and Udupi news
Blog

ಪಡುಬಿದ್ರೆ: ಉದ್ಯಮಿ, ಕಂಬಳ ಸಂಘಟಕ ಅಭಿಷೇಕ್ ಆಳ್ವ ಶವ ಶಾಂಭವಿ ನದಿಯಲ್ಲಿ ಪತ್ತೆ

ಪಡುಬಿದ್ರೆ: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (29 ವ) ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ (ನ.07) ಮುಂಜಾನೆ ಪತ್ತೆಯಾಗಿದೆ. ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

ಕಂಬಳ ಪ್ರೇಮಿಯಾಗಿದ್ದ ಅಭಿಷೇಕ್ ಆಳ್ವ ತಂದೆಯ ಉದ್ಯಮವನ್ನು ನೋಡಿಕೊಳ್ಳುತ್ತಿದ್ದರು. ವಾಮಂಜೂರು ತಿರುವೈಲುಗುತ್ತು ಕಂಬಳವನ್ನು ಅತ್ಯಂತ ಶಿಸ್ತುಬದ್ಧ ಕಂಬಳ ಎಂದು ಹೆಸರು ಮಾಡುವಲ್ಲಿ ಪ್ರಮುಖ ಕಾರಣರಾಗಿದ್ದರು.

ಬುಧವಾರ ತನ್ನ ಸ್ನೇಹಿತರೊಂದಿಗೆ ಊಟ ಮುಗಿಸಿ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು. ಗುರುವಾರ ಸಂಜೆ ಮೂಲ್ಕಿ ಬಪ್ಪನಾಡು ಸೇತುವೆ ಬಳಿ ಅವರ ಕಾರು ಪತ್ತೆಯಾಗಿತ್ತು. ಅಭಿಷೇಕ್ ನಾಪತ್ತೆ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ.

Related posts

Leave a Comment