ಬಜ್ಜೆ: ಬಟ್ಟೆ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಮದರಸಕ್ಕೆ ಹೋಗಿ ಮನೆಗೆ ಹಿಂದಿರುಗುತ್ತಿದ್ದ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ನಡೆದಿದೆ.

ಗಾಯಗೊಂಡ ಬಾಲಕ ಸೌಹಾರ್ದ ನಗರದ ನಿವಾಸಿ ಮುಹಮ್ಮದ್ ಅಝರ್ ಅವರ ಪುತ್ರ ಅಹಿಲ್ ಎಂದು ತಿಳಿದು ಬಂದಿದೆ.
ಗುರುವಾರ ಬೆಳಗ್ಗೆ ಮನೆಯ ಸಮೀಪದ ಮದರಸಕ್ಕೆ ತೆರಳಿ ವಾಪಸ್ ಮನೆಗೆ ಹಿಂದಿರುಗುತ್ತಿದ್ದಾಗ ಏಕಾಏಕಿ ಸುತ್ತುವರಿದ ಬೀದಿ ನಾಯಿಗಳು ಮಗುವಿನ ಕೆನ್ನೆ, ಕೈಗೆ ಕಚ್ಚಿ ಗಂಭೀರ ಗಾಯಗೊಳಿಸಿದೆ ಎಂದು ತಿಳಿದು ಬಂದಿದೆ. ಘಟನೆ ಮನೆಯ ಮುಂಭಾಗದ ರಸ್ತೆಯಲ್ಲಿ ನಡೆದಿದ್ದರಿಂದ ಬಾಲಕನ ಬೊಬ್ಬೆ ಕೇಳಿ ಹೊರಬಂದ ತಾಯಿ ಪುತ್ರನನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ಕೂಡಲೇ ಬಾಲಕನನ್ನು ಬಗ್ಗೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಬಾಲಕನನ್ನು ಕಟೀಲಿನ ದುರ್ಗ ಸಂಜೀವಿನಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

