Mangalore and Udupi news
Blog

ಉಡುಪಿ: ಎರಡು ದ್ವಿಚಕ್ರ ವಾಹನಗಳು ಬೆಂಕಿಗಾಹುತಿ

ಉಡುಪಿ: ಉಡುಪಿ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಎರಡು ದ್ವಿಚಕ್ರ ವಾಹನಗಳು ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನಡೆದಿದೆ.ರಸ್ತೆ ಬದಿ ನಿಲ್ಲಿಸಿ ಹೋಗಿದ್ದ ಎರಡು ದ್ವಿಚಕ್ರ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ ಬೆಂಕಿಯಿಂದ ಎರಡೂ ವಾಹನಗಳು ಕೂಡ ಸಂಪೂರ್ಣ ಸುಟ್ಟು ಹೋಗಿವೆ. ದ್ವಿಚಕ್ರ ವಾಹನದ ವಾರಸುದಾರರು ಪತ್ತೆಯಾಗಿಲ್ಲ. ಘಟನೆಗೆ ಕಾರಣ ಕೂಡ ತಿಳಿದುಬಂದಿಲ್ಲ.ಘಟನಾ ಸ್ಥಳಕ್ಕೆ ಮಲ್ಪೆ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

Leave a Comment