ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯಕ್ಕೆ ವಂಚಿಸಿ, ಓರ್ವ ಆರೋಪಿಗೆ ಜಾಮೀನು ಕೊಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಬ್ದುಲ್ ಹಾಶೀಮ್ (34) ಎಂದು ಗುರುತಿಸಲಾಗಿದೆ.

ಪುತ್ತೂರು ನಿವಾಸಿಯೊಬ್ಬರ ಮಾಲೀಕತ್ವದಲ್ಲಿರುವ ಜಮೀನಿನ ಆರ್‌ಟಿಸಿಯನ್ನು ತನ್ನದೆಂದು ನಂಬಿಸಿ, ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿ ಆರೋಪಿಗೆ ಜಾಮೀನು ಕೊಡಿಸಿ ಈ ವಂಚನೆ ಎಸಗಲಾಗಿದೆ. ಆರೋಪಿ ಆಸ್ತಿಪತ್ರದ ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಕಲಿ ಸಹಿ ಮಾಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿಅ.ಕ್ರ. 84/2025 0 417, 419, 467, 468, 471 ಐಪಿಸಿ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

