Mangalore and Udupi news
Blog

ಎರಡು ಕಾರುಗಳು ಪರಸ್ಪರ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ

ಚಿಕ್ಕಮಗಳೂರು ತಾಲೂಕಿನ ಹಿರೇಗೌಜ‌ ಗ್ರಾಮದ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ್ದಾರೆ. ಕುಮಾರಪ್ಪ (69) ಹಾಗೂ ಸತೀಶ್ (35) ಮೃತ ದುರ್ದೈವಿಗಳು. ಮೃತರಿಬ್ಬರು ಚಿತ್ರದುರ್ಗ ಜಿಲ್ಲೆಯ ಚನ್ನಗಿರಿ ಮೂಲದವರು.

ಹಿರೇಗೌಜ ಗ್ರಾಮದ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ. ಮತ್ತೊಂದು ಕಾರಿನಲ್ಲಿದ್ದ ಡ್ರೈವರ್ ಸ್ಥಿತಿ ಗಂಭೀರವಾಗಿದೆ.
ಗಂಭೀರ ಗಾಯಗೊಂಡ ಚಾಲಕ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related posts

Leave a Comment