ಕಾರ್ಕಳ: ಬೆಲ್ಮಣ್ ಗ್ರಾಮದ ಜಂತ್ರ ಎಂಬಲ್ಲಿ ಬಸೊಂದು ಸ್ಕೂಟರ್ ಗೆ ಡಿಕ್ಕಿಯಾಗಿ ಸವಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಾರ್ಕಳ ಕುಂಟಲ್ಪಾಡಿಯ ರೋಬರ್ಟ್ ಜೋಸೆಫ್ ಟೆಲ್ಲಿಸ್ (68) ಎಂದು ಗುರುತಿಸಲಾಗಿದೆ. ಇವರು ನ.9ರಂದು ಸಂಜೆ ಶಿರ್ವ ಕಡೆಯಿಂದ ಬೆಲ್ಮಣ್ ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿರುವಾಗ ಬೆಲ್ಮಣ್ ಕಡೆಯಿಂದ ಶಿರ್ವ ಕಡೆಗೆ ಬರುತ್ತಿದ್ದ ಬಸ್, ಬೇರೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.ಘಟನೆಯಿಂದ ರೋಬರ್ಟ್ ಸ್ಕೂಟರ್ ಸಹಿತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಅವರು ನ.10ರಂದು ನಸುಕಿನ ವೇಳೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

