ದೆಹಲಿಯ ಕೆಂಪು ಕೋಟೆ ಬಳಿ ನಡೆದ ಭೀಕರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ ನಡೆಸಿದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.ಸಂಚುಕೋರರನ್ನು ಪತ್ತೆ ಹಚ್ಚಿ ಶಿಕ್ಷಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ದೆಹಲಿ ಕಾರು ಸ್ಫೋಟದ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಗಳನ್ನು ನಡೆಸಲಾಗಿದೆ. ಈ ಘಟನೆಯ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಬೇಟೆಯಾಡಲು ಅವರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರೂ ನಮ್ಮ ಸೆಕ್ಯೂರಿಟಿ ಫೋರ್ಸ್‌ಗಳ ಸಂಪೂರ್ಣ ಕೋಪವನ್ನು ಎದುರಿಸಬೇಕಾಗುತ್ತದೆ ಎಂದು ಸಭೆಯ ನಂತರ ಅಮಿತ್ ಶಾ ಹೇಳಿದ್ದಾರೆ.

ಯಾವುದೇ ಭಯೋತ್ಪಾದಕ ಕೃತ್ಯವನ್ನು ಭಾರತದ ವಿರುದ್ಧದ ಯುದ್ಧ ಕೃತ್ಯ ಎಂದು ಪರಿಗಣಿಸಲಾಗುವುದು ಎಂದು ಸರ್ಕಾರ ಈ ಹಿಂದೆ ಘೋಷಿಸಿದ ನಂತರ ಶಾ ನೀಡಿದ ಹೇಳಿಕೆಯು ಹೆಚ್ಚು ಮಹತ್ವದ್ದಾಗಿದೆ. ಪಹಲ್ಲಾಮ್ ಭಯೋತ್ಪಾದಕ ದಾಳಿಯ ನಂತರ, ದೇಶದಲ್ಲಿ ಯಾವುದೇ ಭಯೋತ್ಪಾದಕ ಕೃತ್ಯವನ್ನು ಭಾರತದ ವಿರುದ್ಧದ ಯುದ್ಧ ಕೃತ್ಯ ಎಂದು ಪರಿಗಣಿಸಲಾಗುವುದು ಮತ್ತು ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿತ್ತು.

