Mangalore and Udupi news
Blog

ಉಡುಪಿ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಪರ್ಕಳ ಪಟ್ಟಣದ ಬಳಿ ಕುಸಿದು ಬಿದ್ದಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ತಕ್ಷಣ ಅವರನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಆಂಬುಲೆನ್ಸ್ ಮೂಲಕ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ರವಾನಿಸಿದರು.ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷೆ ನಡೆಸಿ ಆ ವ್ಯಕ್ತಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತರ ಕುರಿತು ಮಾಹಿತಿ ಇರುವವರು ಅಥವಾ ಅವರ ಸಂಬಂಧಿಕರು ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಅಥವಾ ಮಣಿಪಾಲ ಪೊಲೀಸ್‌ ಠಾಣೆಯನ್ನು ಸಂಪರ್ಕಿಸುವಂತೆ ವಿನಂತಿಸಲಾಗಿದೆ.

Related posts

Leave a Comment