Mangalore and Udupi news
Blog

ಕಾರ್ಕಳ : ಮನೆಯಲ್ಲಿ ಜಿಂಕೆ ಮಾಂಸ ಪತ್ತೆ : ಓರ್ವ ವಶಕ್ಕೆ : ಇಬ್ಬರು ಪರಾರಿ….!!

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ತೆಳ್ಳಾರಿನ ಮನೆಯಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಗೋ ಹತ್ಯೆ ಪ್ರಕರಣದ ಸುಳಿವು ಆಧರಿಸಿ ಗ್ರಾಮಾಂತರ ಠಾಣೆ ಪೊಲೀಸರು ನಡೆಸಿದ ದಾಳಿ ವೇಳೆ ಜಿಂಕೆ ಮಾಂಸ ಪತ್ತೆಯಾಗಿದೆ.
ಆರೋಪಿಗಳಾದ ಸಾದತ್ ಮತ್ತು ಶಫತ್ ಎಂಬ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಮನೆಯಲ್ಲಿದ್ದ ಶಕೂರ್ (48) ಅವರನ್ನು ಪೊಲೀಸರು ಬಂಧಿಸಿದ್ದಾರೆ.ಪ್ರಾಥಮಿಕ ತನಿಖೆಯಲ್ಲಿ ಈ ಇಬ್ಬರು ಗೋಕಳ್ಳತನ ಮತ್ತು ಅಕ್ರಮ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಅರಣ್ಯ ಇಲಾಖೆಗೆ ಈ ಕುರಿತು ಮಾಹಿತಿ ನೀಡಲಾಗಿದೆ. ಮುಂದಿನ ತನಿಖೆ ಅರಣ್ಯ ಇಲಾಖೆಯವರು ವಹಿಸಲಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Related posts

Leave a Comment