Mangalore and Udupi news
Blog

ಮಂಗಳೂರು: ಸೈಬರ್ ವಂಚನೆ ಪ್ರಕರಣ; ಇಬ್ಬರ ಬಂಧನ

ಮಂಗಳೂರು: ಮಂಗಳೂರು ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ಹೆಸರಿನಲ್ಲಿ ಬ್ಯಾಂಕ್‌ ಗ್ರಾಹಕರ ಖಾತೆಯಿಂದ ಹಣ ಎಗರಿಸುತ್ತಿದ್ದ ಸೈಬ‌ರ್ ವಂಚನೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ತ್ರಿಪುರಾ ತಾಜ್ಯದ ಧಲೈನ ದಮೆನ್ ಜೋಯ್ ರಿಯಾಂಗ್(27) ಮತ್ತು ಮಣಿಪುರದ ಕಾಂಗ್ರೆನ ಹ್ಯಾಂಗ್ ರಿಯಲ್ ಕೋಮ್ ಯಾನೆ ಮಂಗ್ ತೆ ಅಮೋಶ್ (33) ಎಂದು ತಿಳಿದು ಬಂದಿದೆ.

ಆರೋಪಿಗಳು 300ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹಾಗೂ 250ಕ್ಕೂ ಹೆಚ್ಚು ಸಿಮ್ ಗಳನ್ನು ಬಳಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತ ಆರೋಪಿಗಳಿಂದ 8 ಮೊಬೈಲ್ ಫೋನ್ ಗಳು, 20 ವಿವಿಧ ಬ್ಯಾಂಕ್ ಗಳ ಡೆಬಿಟ್ ಕಾರ್ಡ್ ಗಳು, 18 ವಿವಿಧ ಬ್ಯಾಂಕ್‌ಗಳ ಪಾಸ್ ಬುಕ್ ಗಳು, 11 ವಿವಿಧ ಬ್ಯಾಂಕ್‌ಗಳ ಚೆಕ್‌ ಬುಕ್‌ ಹಾಗೂ 7-ಸಿಮ್ ಕಾರ್ಡ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಪಚಿರಿತ ವ್ಯಕ್ತಿ ದೂರುದಾರರಿಗೆ ಕಸ್ಟಮ್ಸ್ ಹೆಸರಿನಲ್ಲಿ ಹಂತವಾಗಿ ಒಟ್ಟು 7,27,000 ರೂ. ಹಣವನ್ನು ಪಡೆದು ವಂಚನೆ ಮಾಡಿರುವುದಾಗಿದೆ ಎಂಬ ದೂರಿನಂತೆ ಮಂಗಳೂರು ನಗರ ಸಿ.ಇ.ಎನ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆ ಕೈಗೊಂಡಾಗ ಸೈಬರ್ ವಂಚನೆ ಪ್ರಕರಣದ ಇಬ್ಬರು ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಈ ಪ್ರಕರಣದಲ್ಲಿ ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದುಕೊಂಡು ವಿವರ ಪರಿಶೀಲಿಸಿ ಬ್ಯಾಂಕ್‌ ಖಾತೆದಾರನಾದ ದಮೆನ್ ಜೋಯ್ ರಿಯಾಂಗ್ ಎಂಬಾತನನ್ನು ನ.13 ರಂದು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿತ್ತು ಎಂದು ತಿಳಿದು ಬಂದಿದೆ. ಪ್ರಕರಣದ ತನಿಖೆ ಮುಂದುವರಿಸಿದಾಗ ಇನ್ನೊಬ್ಬ ಆರೋಪಿ ಕಾಂಗ್ರೆನ ಹ್ಯಾಂಗ್ ರಿಯಲ್ ಕೋಮ್ ಪೊಲೀಸರ ಬಲೆಗೆ ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.

Related posts

Leave a Comment