ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ವ್ಯಕ್ತಿಯೋರ್ವರು ನ.10 ರಂದು ಪೆರ್ಡೂರಿನಲ್ಲಿರುವ ತನ್ನ ತಂಗಿ ಮನೆಗೆ ತೆರಳಿದ್ದು ಬಳಿಕ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ವ್ಯಕ್ತಿ ಕಕ್ಕುಜೆ ಗಾಮದ ನಿವಾಸಿ ಸೂರ್ಯ (52) ಎಂದು ತಿಳಿದು ಬಂದಿದೆ. ಇವರು 5 ಅಡಿ 2 ಇಂಚು ಎತ್ತರ, ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪೊಲೀಸ್ ಹಿರಿಯಡ್ಕ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

