Mangalore and Udupi news
Blog

ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಉಡುಪಿಯಲ್ಲಿ ಅದ್ಧೂರಿ ಸ್ವಾಗತ

ಆ್ಯಂಕರ್: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥ್ ಗೌಡ ರವರು ತನ್ನ ರಾಜ್ಯ ವ್ಯಾಪಿ ವಿಧಾನಸಭಾ ಕ್ಷೇತ್ರ ಭೇಟಿ ಕಾರ್ಯಕ್ರಮ ನಿಮಿತ್ತ ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾರ್ಯಕ್ರಮಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಹಾಗೂ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಮಾಜಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ವಿ ಅಮೀನ್ ರವರು ಅದ್ಧೂರಿಯಾಗಿ ಸ್ವಾಗತಿಸಿದರು. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಮಂಜುನಾಥ್ ಗೌಡ ಅವರು, ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಿ, ಪಕ್ಷವನ್ನ ಬಲಿಷ್ಠಗೊಳಿಸಲಾಗುವುದು. ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಉತ್ತೇಜನ ನೀಡುವ ಕೆಲಸ ಮಾಡಲಾಗುತ್ತದೆ.
ಮಾತ್ರವಲ್ಲದೆ ರಾಜ್ಯ ಸರ್ಕಾರದ ೫ ಗ್ಯಾರಂಟಿಗಳನ್ನ ಮನೆ ಮನೆಗೆ ತಲುಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು… ಇನ್ನು ಬಿಹಾರದಲ್ಲಿ ಮತಕಳ್ಳತನ ಮೂಲಕ ಆಡಳಿತ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಮಂಗಳೂರಿನ ಸುರತ್ಕಲ್ ನಲ್ಲಿ ಇಂದು ಸಂಜೆ ದೊಡ್ಡ ಮಟ್ಟಿನ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು.

ಈ ವೇಳೆ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಸೇರಿದಂತೆ ಮೊದಲಾದವರು ಮಂಜುನಾಥ ಗೌಡ ಅವರು ಜೊತೆಯಲ್ಲಿದ್ದರು.
ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಜ್, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸುರಯ್ಯ ಅಂಜುಮ್ ,ಅಜಿತ್ ಶೆಟ್ಟಿ,ಕಲ್ಯಾಣ್, ಅನಿಲ್,ಅಭಿನಂದನ್,ಪ್ರಸಾದ್ ಪಂಜೆ ,ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ ಶೆಟ್ಟಿ , ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಕರ್ಕೇರ, ನವೀನ್ ಸಾಲಿಯಾನ್ , ನವೀನ್ ಬಂಗೇರ ,ರಚನ್ಸಾ
ಸಾಲಿಯಾನ್,ಪ್ರವೇಶ್ ಶೆಟ್ಟಿ, ಶಶಿ ಶರ್ಮಾ, ಅಪ್ಪು ಶೆಟ್ಟಿ, ಉದಯ್ ಆಚಾರ್ಯ,ಪ್ರಶಾಂತ್,ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು…

Related posts

Leave a Comment