ಸುಳ್ಯ: ಮಡಿಕೇರಿಯಿಂದ ಜ್ಯೂಸ್ ಬಾಟ್ಲಿ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿ ಬಿದ್ದ ಘಟನೆ ದೇವರಕೊಲ್ಲಿ ಫಾಲ್ಸ್ ಬಳಿ ಬುಧವಾರ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಲಾರಿ ದೇವರಕೊಲ್ಲಿ ಫಾಲ್ಸ್ ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ಈ ಸಂದರ್ಭ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಮಡಿಕೇರಿ ಅಗ್ನಿಶಾಮಕದವರು ಬಂದು ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಿಂದ ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.
previous post
next post

