Mangalore and Udupi news
Blog

ಸುಳ್ಯ: ಚರಂಡಿಗೆ ಕಾರು ಡಿಕ್ಕಿ; ಮೂವರಿಗೆ ಗಾಯ

ಸುಳ್ಯ: ಕನಕಮಜಲು ಸಮೀಪ ಕನ್ನಡ್ಕ ಎಂಬಲ್ಲಿ ಕಾರೊಂದು ರಸ್ತೆ ಬದಿಯ ಚರಂಡಿಗೆ ಡಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.ಕಾರು ಚಾಲಕ ಮಂಡೆಕೋಲಿನ ಖಲೀಲ್ ಸಹಿತ ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಪುತ್ತೂರು ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕೂಡಲೇ ಆಟೊ ರಿಕ್ಷಾದಲ್ಲಿ ಸುಳ್ಯದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತು ಎಂದು ತಿಳಿದು ಬಂದಿದೆ.

Related posts

Leave a Comment