ಶಂಕರ ನಾರಾಯಣ: ಬೈಕೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಶಂಕರನಾರಾಯಣ ಗ್ರಾಮದ ಕಲ್ಲಗದ್ದೆ ಎಂಬಲ್ಲಿ ನಡೆದಿದೆ.ಮೃತರನ್ನು ಸಚಿನ್ ಕಲ್ಲಪ್ಪ ಸಂಕ್ರಟ್ಟಿ(28) ಎಂದು ಗುರುತಿಸಲಾಗಿದೆ.ಸಚಿನ್ ಅವರು ಶಂಕರನಾರಾಯಣ ಪದವಿ ಕಾಲೇಜಿನಲ್ಲಿ ನಡೆಯುತ್ತಿದ್ದ ಹುಟ್ಟೂರು ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಂತರ ಸ್ನೇಹಿತ ಬಸವ ಕಿರಣ ಎಂಬವರನ್ನು ಬಸ್ಸಿಗೆ ಬಿಡಲು ಕುಂದಾಪುರಕ್ಕೆ ಬೈಕಿನಲ್ಲಿ ಹೊರಟಿದ್ದರು.

ಅಂಪಾರು ಮಾರ್ಗವಾಗಿ ಕುಂದಾಪುರಕ್ಕೆ ಹೊಗುತ್ತಿದ್ದ ಬೈಕ್, ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಸಚಿನ್ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
previous post

