Mangalore and Udupi news
Blog

ಮಂಗಳೂರು: ದುಷ್ಕರ್ಮಿಗಳಿಂದ ಯುವಕನ ಮೇಲೆ ತಲ್ವಾರ್ ದಾಳಿ…!!

ಮಂಗಳೂರು : ಯುವಕನೋರ್ವನಿಗೆ‌ ನಾಲ್ಕು ಮಂದಿ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ಮಾಡಿರುವ ಘಟನೆ ಎಡಪದವು ಎಂಬಲ್ಲಿ ಸಂಭವಿಸಿದೆ.ಎಡಪದವು ಪೂಪಾಡಿ ಕಲ್ಲು ನಿವಾಸಿ ಅಖಿಲೇಶ್ ತಲವಾರು ದಾಳಿಗೆ ಒಳಗಾದವರು ಎಂದು ತಿಳಿದು ಬಂದಿದೆ.

ಅಖಿಲೇಶ್ ಅವರ ಬಲ‌ಕೈಗೆ ಗಂಭೀರ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಅಖಿಲೇಶ್ ಅವರು ಎಡಪದವು ಕಡೆಯಿಂದ ಮಂಗಳೂರು ಕಡೆಗೆ ತನ್ನ ಆಕ್ಟಿವಾದಲ್ಲಿ ಹೋಗುತ್ತಿದ್ದ ಸಂದರ್ಭ ಎಡಪದವಿನಲ್ಲಿ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ತಲವಾರಿನಿಂದ‌ ದಾಳಿ ಮಾಡಿದೆ.

ಘಟನೆ ನಡೆದ ಕೂಡಲೇ ಸ್ಥಳದಲ್ಲಿದ್ದ ಸಾರ್ವಜನಿಕರು ಅಖಿಲೇಶ್ ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಅಖಿಲೇಶ್ ಸ್ಥಳೀಯವಾಗಿ ಕೇಟರಿಂಗ್ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕಾರ್ಯ ಮುಂದುವರೆಸಿದ್ದಾರೆ.

Related posts

Leave a Comment