ಉಳ್ಳಾಲ: ಮಾದಕ ವಸ್ತುವನ್ನು ಸೇವಿಸಿ, ಅಕ್ಕರೆ ಕೆರೆ ಪರಿಸರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಯುವಕನೋರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಯುವಕ ಅಕ್ಕರೆ ಕೆರೆ ನಿವಾಸಿ ಮುಹಮ್ಮದ್ ಶಾಝಿಲ್(29) ಎಂದು ತಿಳಿದು ಬಂದಿದೆ.
ಅಕ್ಕರೆ ಕೆರೆ ಪರಿಸರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಈತನನ್ನು ಉಳ್ಳಾಲ ಠಾಣಾ ಪಿಎಸ್‌ಐ ಕೃಷ್ಣ ಕೆ ಹೆಚ್ ರವರು ಸಿಬ್ಬಂದಿಯೊಂದಿಗೆ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಈತ ಮಾದಕವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
previous post

