Mangalore and Udupi news
Blog

ಹೊನ್ನಾವರ : ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿ : ಓರ್ವ ವಿದ್ಯಾರ್ಥಿ ಮೃತ್ಯು : 26ಕ್ಕೂ ಹೆಚ್ಚು ಮಕ್ಕಳಿಗೆ ಗಾಯ…!!

ಹೊನ್ನಾವರ: ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು 26 ಮಂದಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಸಂಭವಿಸಿದೆ. ಮೃತ ಬಾಲಕನನ್ನು ಮೈಸೂರಿನ ಪವನ್ (15) ಎಂದು ಗುರುತಿಸಲಾಗಿದೆ. ಈತ SSLC ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ.

ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳು ಗೋಕರ್ಣಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಬಸ್‌ ಸುಳೆ ಮುರ್ಕಿ ಕ್ರಾಸ್ ಬಳಿ ಬಸ್‌ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ ಈ ಬಗ್ಗೆ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

Leave a Comment