ಉಡುಪಿ : ಯುವಕನೋರ್ವ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಡಿಸೆಂಬರ್ 15 ರವಿವಾರ ಬೆಳಗಿನ ಜಾವ ಉದ್ಯಾವರ ಬೊಳ್ಜೆಯಲ್ಲಿ ನಡೆದಿದೆ.
ಮೃತರನ್ನು ಬೊಳ್ಜೆಯ ಆದಿತ್ಯ(24) ಎಂದು ಗುರುತಿಸಲಾಗಿದೆ.
ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತಮ್ಮ ಸ್ನೇಹಿತ ಸುಕ್ಷಿತ್ ಅವರ ನೆನಪಿಗಾಗಿ ಆದಿತ್ಯ ಇತ್ತೀಚೆಗೆ ಕ್ರಿಕೆಟ್ ತಂಡವನ್ನು ರಚಿಸಿದ್ದರು. ಸ್ಥಳೀಯ ಟೂರ್ನಿಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಿಕೆಯಲ್ಲಿ ಹೆಸರುವಾಸಿಯಾಗಿದ್ದ ಆದಿತ್ಯ ಹಿಂದಿನ ಸಂಜೆ ಪೆರಂಪಳ್ಳಿಯಲ್ಲಿ ನಡೆದ ಪಂದ್ಯದಲ್ಲಿ ಆಡಿದ್ದರು.
ಬೆಳಿಗ್ಗೆ 4 ಗಂಟೆಯ ಸುಮಾರಿಗೆ ಮನೆಗೆ ಹಿಂದಿರುಗಿದ ಬಳಿಕ ಆದಿತ್ಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಅವರ ಆತ್ಮಹತ್ಯೆಗೆ ಕಾರಣಗಳು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.