Mangalore and Udupi news
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶರಾಜ್ಯ

ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಹೆಚ್ಚಳ – ಗಡಿಭಾಗದಲ್ಲಿ ಹೈಅಲರ್ಟ್.!!

ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕರ್ನಾಟಕದ ಗಡಿಭಾಗದಲ್ಲಿ ಆತಂಕ ಮನೆ ಮಾಡಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ ಬಗ್ಗೆಯೂ ವರದಿಯಾಗಿದೆ. ಈ ಕಾರಣದಿಂದ ಕರ್ನಾಟಕದ ಗಡಿ ಭಾಗಗಳಲ್ಲಿ ಎಚ್ಚರ ವಹಿಸಲಾಗಿದೆ.

ತೆಲಂಗಾಣ, ಆಂಧ್ರ ಪ್ರದೇಶಗಳಲ್ಲಿ ಕೋಳಿಗಳ ಮಾರಣಹೋಮ ನಡೆಯುತ್ತಿದೆ. ಇತರ ಪ್ರದೇಶಗಳಲ್ಲಿ ಚಿಕನ್ ಶಾಪ್​ಗಳಲ್ಲಿ ನೂರಾರು ಕೋಳಿಗಳು ಸಾಯುತ್ತಿವೆ. ಈ ಬಗ್ಗೆ ಜನರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸತ್ತ ಕೋಳಿಗಳನ್ನ ಮಣ್ಣು ಮಾಡುತ್ತಿಲ್ಲ. ಬದಲಾಗಿ ಮೀನುಗಳಿಗೆ ಆಹಾರವಾಗಿ ಹಾಕಲಾಗುತ್ತಿದೆ. ಇದೇ ಮೀನುಗಳನ್ನು ತಿನ್ನುವ ಜನರ ಆರೋಗ್ಯ ಸ್ಥಿತಿ ಹದಗೆಡುತ್ತಿದೆ. ನಗರಸಭೆ, ಪುರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆ ಪ್ರದೇಶದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇರೆ ರಾಜ್ಯಗಳಿಂದ ಸೋಂಕು ಹರಡುವ ಭೀತಿ ಹಿನ್ನೆಲೆ ಬೀದರ್‌, ಬೆಳಗಾವಿ, ಬಳ್ಳಾರಿ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಬೇರೆ ರಾಜ್ಯಗಳಿಂದ ಆಮದು ಮಾಡಲಾಗುತ್ತಿರುವ ಕೋಳಿ ಹಾಗೂ ಮೊಟ್ಟೆಗಳಿಗೆ ನಿರ್ಬಂಧ ಹೇರಲಾಗಿದೆ. ಬೀದರ್ ಗಡಿಯಲ್ಲಿಯೂ ಹೈಅಲರ್ಟ್ ಘೋಷಿಸಲಾಗಿದೆ.

Advertisement

Related posts

Leave a Comment