ಸೆಲ್ಫಿ ಹುಚ್ಚಿಗೆ ಕಾಲು ಜಾರಿ ಬಿದ್ದು ನಾಪತ್ತೆಯಾದ ಘಟನೆ ತುಮಕೂರು ತಾಲೂಕಿನ ಮೈದಾಳ ಕೆರೆ ಕೋಡಿ ಬಳಿ ನಡೆದಿದ್ದು. ಅದೃಷ್ಟವಶಾತ್ ಅಗ್ನಿಶಾಮಕ ದಳದ ಸತತ 12 ಗಂಟೆ ಕಾರ್ಯಾಚರಣೆಯಿಂದ ಯುವತಿ ಸಾವನ್ನೇ ಗೆದ್ದು ಬಂದಿದ್ದಾಳೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಸೋಮನಾಥ್ ಎಂಬುವವರ ಮಗಳಾದ ಹಂಸ ನಿನ್ನೆ ರಜೆ ಹಿನ್ನೆಲೆ ಸ್ನೇಹಿತರ ಜೊತೆ ಮಂದಾರಗಿರಿ ಬೆಟ್ಟಕ್ಕೆ ಬಂದಿದ್ದಿಳು. ಈ ವೇಳೆ ಅಲ್ಲೆ ಸಮೀಪದಲ್ಲಿರುವ ಮೈದಾಳ ಕೆರೆ ಕೋಡಿ ಹರಿಯುವ ಸುದ್ದಿ ಕೇಳಿ ನೋಡಲು ಕೆರೆ ಬಳಿ ಹೋಗಿದ್ದರು.
ಕೆರೆ ಕೋಡಿ ಬಳಿ ತೆರಳಿರುವ ಯುವತಿ ರಭಸವಾಗಿ ಹರಿಯುವ ನೀರಿನೊಂದಿಗೆ ಸೆಲ್ಪಿ ತೆಗೆದುಕೊಳ್ಳಲು ಮುಂದಾಗಿದ್ದಾಳೆ. ಈ ವೇಳೆ ಆಯತಪ್ಪಿ ಕಾಲು ಜಾರಿ ಪೊಟರೆಯೊಳಗೆ ಬಿದ್ದಿರುವ ರಭಸವಾಗಿ ಹರಿಯುವ ನೀರಿನಲ್ಲಿ ಕೊಚ್ಚಿಹೋಗಿದ್ದಾಳೆ.
ನಿನ್ನೆಯಿಂದಲೇ ನಿರಂತರವಾಗಿ ಅಗ್ನಿಶಾಮಕ ದಳದ ಅಧಿಕಾರಿ ಸಿಬ್ಬಂದಿ ಹಾಗೂ ಪೊಲೀಸರು ಯುವತಿ ಪತ್ತೆಗೆ ಕಾರ್ಯಾಚರಣೆ ನಡೆಸಿ ಯುವತಿಯನ್ನು ಪತ್ತೆ ಹಚ್ಚಿದ್ದಾರೆ. ಪತ್ತೆಯಾದ ಯುವತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಸಾವಿನ ದವಡೆಯಿಂದ ಪಾರಾಗಿದ್ದಾಳೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Selfie crazy: youth went missing while selfie clicking. She slipped and went missing near Maidala Kere Kodi in Tumkur taluk. Fortunately, the young woman survived because of contuinoes 12-hour continuous operation. Hamsa, the daughter of Somnath of Shivrampur village, Gubbi taluk, Tumkur district.