ಮಂಗಳೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ದ ಡಿ.4 ರಂದು ಮಂಗಳೂರಿನಲ್ಲಿ ನಡೆಯುವ ಬೃಹತ್ ಪ್ರತಿಭಟನೆಗೆ ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ವಿಭಾಗ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.
ಹಿಂದೂ ಹಿತರಕ್ಷಣಾ ಸಮಿತಿ ಮಂಗಳೂರು ಇದರ ವತಿಯಿಂದ ಡಿ.4 ರಂದು ಮಂಗಳೂರಿನಲ್ಲಿ ನಡೆಯಲಿರುವ ಬಾಂಗ್ಲಾ ಸರಕಾರದ ವಿರುದ್ದದ ಬೃಹತ್ ಪ್ರತಿಭಟನೆ ಜ್ಯೋತಿ ವೃತ್ತದಿಂದ ತಾಲೂಕು ಕಛೇರಿ ವರೆಗೆ ನಡೆಯಲಿದೆ.
ಬಾಂಗ್ಲಾದೇಶದಲ್ಲಿ ನಡೆಯುವ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ದೇವಸ್ಥಾನದ ಮೇಲಿನ ಅಕ್ರಮದ ವಿರುದ್ದ ನಡೆಯುವ ಪ್ರತಿಭಟನೆ ಮೆರವಣಿಗೆಯಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ವಿಭಾಗದ ಎಲ್ಲಾ ಪದಾಧಿಕಾರಿಗಳು ಸೇರಿದಂತೆ ಎಲ್ಲಾ ಕಾರ್ಯಕರ್ತರು ಭಾಗವಹಿಸಬೇಕಾಗಿ ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ಹೃತೇಶ್ ಪಾಟಾಳಿ, ಸಂಯೋಜಕ ಹೃತಿಕ್ ಶೆಟ್ಟಿ ಹಾಗೂ ಎಲ್ಲಾ ಪದಾಧಿಕಾರಿಗಳು ಕರೆ ನೀಡಿದ್ದಾರೆ.