Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಯುವಕ ದಾರುಣ ಸಾವು.!!

Advertisement

ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಯುವಕ ಮೃತಪಟ್ಟ ಘಟನೆ ಕಲ್ಮಂಜ ನಿಡಿಗಲ್ ಸಮೀಪ ಜ.16ರಂದು ತಡರಾತ್ರಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ(25) ಮೃತಪಟ್ಟವರು.

ಧರ್ಮಸ್ಥಳ | ನಿಯಂತ್ರಣ ತಪ್ಪಿ ಉರುಳಿಬಿದ್ದ ಬೈಕ್: ಸವಾರ ಮೃತ್ಯು

ಕಾರ್ಯಕ್ರಮಕ್ಕೆಂದು ಮಂಗಳೂರಿಗೆ ತೆರಳಿದ್ದ ಮಿಥುನ್ ಕರ್ಕೇರ ಅಲ್ಲಿಂದ ರಾತ್ರಿ ಹಿಂದಿರುಗುವ ವೇಳೆ ಕಲ್ಮಂಜ ನಿಡಿಗಲ್ ಸಮೀಪ ಬೈಕ್ ಸ್ಕಿಡ್ ಆಗಿ ರಸ್ತೆಗೆ ಉರುಳಿಬಿದ್ದಿದೆ. ಈ ವೇಳೆ ತಲೆಭಾಗಕ್ಕೆ ಗಂಭೀರ ಗಾಯವಾಗಿತ್ತು.

ಸ್ಥಳೀಯರು ಅವರನ್ನು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಖಾಸಗಿ ಬಸ್ ಮತ್ತು ಆಟೋ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮಿಥುನ್ ಅವರು, ತಂದೆ-ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.

Related posts

Leave a Comment