ಉಳ್ಳಾಲ : ಸ್ಕೂಟರ್ ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ.
ಮೃತರನ್ನು ಮಾಡೂರು ಶಿವಾಜಿನಗರದ ನಿವಾಸಿ ನಾಗೇಶ್(50) ಎಂದು ಗುರುತಿಸಲಾಗಿದೆ.
ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಕಾಲೇಜಿನ ಬಸ್ಸು ಕಂಡಕ್ಟರ್ ಆಗಿ ನಾಗೇಶ್ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಕೆಲಸಕ್ಕೆ ರಜೆಯಿದ್ದ ಕಾರಣ ಬೀರಿ ಪೇಟೆಯಿಂದ ಸ್ಕೂಟರಲ್ಲಿ ತೆಂಗಿನ ಕಾಯಿಗಳನ್ನ ಖರೀದಿಸಿ ಮನೆಗೆ ತರುವ ಸಂದರ್ಭ ಸ್ಕೂಟರ್ ನಿಯಂತ್ರಣ ತಪ್ಪಿ ಮರಕ್ಕೆ ಬಡಿದಿದೆ.
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅವರು ಪತ್ನಿ ಮತ್ತು ಏಕೈಕ ಪುತ್ರಿಯನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
The incident took place on Wednesday in which the scooter rider lost control and hit a tree and died on the spot.