Mangalore and Udupi news
ಅಪಘಾತಉಡುಪಿಪ್ರಸ್ತುತ

ಉಡುಪಿ: ಬೈಕ್‌ಗೆ ಕಾರು ಡಿಕ್ಕಿ – ವಿದ್ಯಾರ್ಥಿ ಮೃತ್ಯು.!!

ಉಡುಪಿ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಅ.7ರ ಸೋಮವಾರ ರಾತ್ರಿ ಎಂಜಿಎಂ ಕಾಲೇಜು ಎದುರು ನಡೆದಿದೆ.

ಮೃತರನ್ನು ಹಿರಿಯಡ್ಕ ನಿವಾಸಿ ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್‌ (18) ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ತಿರುವು ಪಡೆದು ಮಣಿಪಾಲ ಕಡೆಗೆ ಹೋಗುತ್ತಿದ್ದ ಬೈಕಿಗೆ ಮಣಿಪಲ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ವೀರಜ್‌ ಬೈಕ್‌ ಸಮೇತ ರಸ್ತೆಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ. ಉಡುಪಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The incident in which a bike rider died after being hit by a car took place in front of MGM College on Monday night of 7th. The deceased has been identified as Veeraj (18), a graduate student of Thenkanidiyur College, a resident of Hiriadka

Related posts

Leave a Comment