Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಆಸ್ಪತ್ರೆಗೆ ನುಗ್ಗಿ ಸಿಬ್ಬಂದಿಗೆ ಚೂರಿ ಇರಿತ – ವಿಮಾನ ನಿಲ್ದಾಣದಲ್ಲಿ ಆರೋಪಿಯ ಬಂಧನ

ಕಾಸರಗೋಡು: ನಗರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನುಗ್ಗಿ ನೌಕರನಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಆರೋಪಿಯನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಯುವಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬೇಕಲ ಪೊಲೀಸ್‌ ಠಾಣೆ ವ್ಯಾಪ್ತಿಯ ಮುಹಮ್ಮದ್ ಚೌಹರ್ ಜಿಸ್ವಾನ್ (24) ಬಂಧಿತ ಆರೋಪಿ.

ಅಕ್ಟೋಬರ್ 18 ರಂದು (ಶುಕ್ರವಾರ) ಸಂಜೆ 4 ಗಂಟೆ ಸುಮಾರಿಗೆ ನಗರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಬಂದ ಚೌಹರ್ ಜಿಸ್ವಾನ್ ನೌಕರನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಉಳಿಯತ್ತಡುಕ ನಿವಾಸಿ ಅಬ್ದುಲ್ ರಜಾಕ್ (38) ಎಂಬಾತ ಎಂಆರ್‌ಐ ಸ್ಕ್ಯಾನಿಂಗ್ ವಿಭಾಗದಲ್ಲಿ ತಾಂತ್ರಿಕ ಸಿಬ್ಬಂದಿಯಾಗಿದ್ದು, ದಾಳಿಯಲ್ಲಿ ಗಾಯಗೊಂಡಿದ್ದಾರೆ. ಈ ಕುರಿತಾಗಿ ಕೇಸು ದಾಖಲಾಗಿದೆ.‌

ಎಫ್‌ಐಆರ್‌ನಲ್ಲಿ ಮಹಿಳೆಗೆ ಸಂಬಂಧಿಸಿದ ವಿಚಾರವೇ ದೌರ್ಜನ್ಯಕ್ಕೆ ಕಾರಣ ಎಂದು ಹೇಳಲಾಗಿದೆ. ಹಲ್ಲೆ ನಡೆಸಿ ಪರಾರಿಯಾಗಿರುವ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಈ ದೃಶ್ಯಗಳನ್ನು ಕೇಂದ್ರೀಕರಿಸಿ ನಡೆಸಿದ ತನಿಖೆಯಲ್ಲಿ ಆರೋಪಿ ಪತ್ತೆಯಾಗಿದ್ದಾನೆ. ವಿದೇಶಕ್ಕೆ ದಾಟುವ ಸಾಧ್ಯತೆ ಇರುವುದರಿಂದ ವಿಮಾನ ನಿಲ್ದಾಣಗಳಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಇದರ ಆಧಾರದ ಮೇಲೆ ಸೋಮವಾರ ರಾತ್ರಿ ಬಂಧಿಸಲಾಗಿದೆ. ಕಾಸರಗೋಡು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Related posts

Leave a Comment