Mangalore and Udupi news
ಅಪರಾಧದಕ್ಷಿಣ ಕನ್ನಡಮಂಗಳೂರು

ಸುರತ್ಕಲ್ ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ ಆರೋಪ – ಐವರ ಬಂಧನ.!!

ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣ ಸಂಬಂಧ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು, ಮುಂಚೂರು ನಿವಾಸಿ ಸುಜಿತ್ ಎಂದು ತಿಳಿದು ಬಂದಿದೆ.

ಆರೋಪಿಗಳು ಜನತಾ ಕಾಲನಿ ಸ್ಮಶಾನದ ಕಡೆಯಿಂದ ಎರಡು ಬೈಕ್ ಗಳಲ್ಲಿ ಬಂದು, ಮಸೀದಿಯ ಹಿಂಭಾಗದ ಕಿಟಕಿಗಳ ಮೇಲೆ ಕಲ್ಲು ತೂರಾಟ ಮಾಡಿದ್ದರು ಎಂದು ತಿಳಿದು ಬಂದಿದೆ.

Related posts

Leave a Comment