ಪುಷ್ಪ 2 ಸಿನಿಮಾ ಸಕ್ಸಸ್‌ನಲ್ಲಿದ್ದ ನಟ ಅಲ್ಲು ಅರ್ಜುನ್‌ಗೆ ಬಿಗ್ ಶಾಕ್ ಎದುರಾಗಿದೆ. ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಡಿಸೆಂಬರ್ 4 ರಂದು ಪುಷ್ಪ 2 ಸಿನಿಮಾ ರಿಲೀಸ್ ದಿನ ದುರ್ಘಟನೆಯೊಂದು ನಡೆದು ಹೋಗಿತ್ತು. ಸಂಧ್ಯ ಥಿಯೇಟರ್‌ನಲ್ಲಿ ಕಾಲ್ತುಳಿತ ನಡೆದಿದ್ದು ಗೊತ್ತೇ ಇದೆ. ಇದೇ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ರು.
ಕಾಲ್ತುಳಿತ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಕೂಡ ಪೊಲೀಸರು ಆರೋಪಿಯನ್ನಾಗಿ ಸೇರಿಸಿದ್ದರು. ಆದರೆ ಅಲ್ಲು ಅರ್ಜುನ್ ಈಗಾಗಲೇ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಅಲ್ಲು ಅರ್ಜುನ್ ಹಠಾತ್ ಬಂಧನದಿಂದ ಚಿತ್ರರಂಗದ ಜೊತೆಗೆ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.
ಈಗಾಗಲೇ ಇದೇ ಪ್ರಕರಣದಲ್ಲಿ ಸಂಧ್ಯಾ ಚಿತ್ರಮಂದಿರದ ಮಾಲೀಕ, ಚಿತ್ರಮಂದಿರದ ಮ್ಯಾನೇಜರ್ ಹಾಗೂ ಕಾಲ್ತುಳಿತ ನಡೆದ ದಿನ ಅಲ್ಲು ಅರ್ಜುನ್ ಜೊತೆಗೆ ಇದ್ದ ಕೆಲವು ಬೌನ್ಸರ್ಗಳನ್ನು ಸಹ ಈಗಾಗಲೇ ಬಂಧಿಸಲಾಗಿದೆ. ಅಲ್ಲು ಅರ್ಜುನ್ ವಿರುದ್ಧ 105, 118 (5) ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಲಾಗಿದೆ.
ಮಧ್ಯರಾತ್ರಿ ವೇಳೆ ಡಿ.4ರಂದು ಸಂಧ್ಯಾ ಸಿನಿಮಾ ಥಿಯೃಟರ್‌ನಲ್ಲಿ ನಡೆದ ಪ್ರೀಮಿಯರ್ ಶೋ ವೇಳೆ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದಳು. ಆಗ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದರು.
ಈ ವೇಳೆ ಅಲ್ಲು ಅರ್ಜುನ್ ಆಗಮಿಸಿದ್ದರು. ನಾಯಕನನ್ನು ನೋಡಲು ಜನರು ಗೇಟ್‌ನತ್ತ ನುಗ್ಗಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿತ್ತು. ಈ ಸಂಬಂಧ ಅಲ್ಲು ಅರ್ಜುನ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಇನ್ನೂ ಮೃತ ಮಹಿಳೆಯ ಕುಟುಂಬಕ್ಕೆ ಸ್ವತಃ ಅಲ್ಲು ಅರ್ಜುನ್ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರು. ಇದೆಲ್ಲದರ ನಡುವೆ ಇಂದು ಪೊಲೀಸರು ಅಲ್ಲು ಅರ್ಜುನ್ ಮನೆಗೆ ಹೋಗಿ ಅವರನ್ನು ಬಂಧಿಸಿದ್ದಾರೆ.