Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ತಿಮಿಂಗಿಲ ವಾಂತಿ ಅಕ್ರಮ ಸಾಗಾಟ – ಇಬ್ಬರು ಆರೋಪಿಗಳ ಬಂಧನ

ತಿಮಿಂಗಿಲದ ವಾಂತಿ ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರ ಬಂಧನವಾಗಿದೆ. ಬೆಂಗಳೂರಿನಿಂದ ತಮಿಳುನಾಡಿಗೆ ಕಾರಿನಲ್ಲಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಕೊಳ್ಳೇಗಾಲ ಪೊಲೀಸರು ಕೊಳ್ಳೇಗಾಲದ ಹೊಸ ಅಣಗಳ್ಳಿ ಸಮೀಪ ಬಂಧಿಸಿದ್ದಾರೆ.

ಮೈಸೂರು ಆಶೋಕಪುರಂ ನಿವಾಸಿ ವಸಂತ ಕುಮಾರ್ (50), ರಾಮನಗರ ಜಿಲ್ಲೆಯ ಮೂಲದ ವೈರಮುಡಿ (40) ಬಂಧಿತ ಆರೋಪಿಗಳಾಗಿದ್ದಾರೆ. ಸಾಗಾಟದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ವಿಚಾರಣೆಗಿಳಿದಿದ್ದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರನ್ನು ತಡೆದು ಪರಿಶೀಲಿಸಿದಾಗ ಕಾರಿನ ಡಿಕ್ಕಿಯಲ್ಲಿ 4.386 ಕೆಜಿ ತಿಮಿಂಗಿಲ ವಾಂತಿ ಅಂದರೆ ಅಂಬರ್‍ ಗ್ರೀಸ್ ಪತ್ತೆಯಾಗಿದೆ. ಪೊಲೀಸರು ತಿಮಿಂಗಿಲ ವಾಂತಿಯನ್ನು ವಶಪಡಿಸಿಕೊಂಡಿದ್ದು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.

Related posts

Leave a Comment