ಅಂಕೋಲಾ: ನ್ಯಾನೋ ಕಾರು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ಕೊಡಸಣಿಯ ಅಪಾಯಕಾರಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಗೊಂಡಿದೆ. ಪರಿಣಾಮ ಓರ್ವ ಮೃತಪಟ್ಟರೆ ಮತ್ತೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನ. 24ರ ರವಿವಾರ ಬೆಳಿಗ್ಗೆ ಅಪಘಾತ ಸಂಭವಿಸಿದೆ. ಹೊನ್ನಾವರ ಅರೆಯಂಗಡಿ ಮೂಲದ ರಮೇಶ ಶಿವಾನಂದ ನಾಯ್ಕ ಮೃತ ದುರ್ದೈವಿ. ವಧು ಅನ್ವೇಷಣೆಗಾಗಿ ಅದೇ ಕಾರಿನಲ್ಲಿ ಅಂಕೋಲಾ ಕಡೆ ಬರುತ್ತಿದ್ದ ಎನ್ನಲಾದ ದಿನೇಶ ಎನ್ನುವವನ ತಲೆ ಹಾಗೂ ಇತರೆಡೆ ಗಾಯನೋವುಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಅವೈಜ್ಞಾನಿಕ ಹಾಗೂ ಅಪೂರ್ಣ ಹೆದ್ದಾರಿ ಕಾಮಗಾರಿಯಿಂದ ಕೊಡಸಣಿ ಕ್ರಾಸ್ ಬಳಿ ಹತ್ತಾರು ಅಪಘಾತಗಳು ಸಾವು ನೋವುಗಳು ಸಂಭವಿಸುತ್ತಲೇ ಇದ್ದು ಕಳೆದ ವಾರ ಇದೇ ಸ್ಥಳದ ಹತ್ತಿಪತ್ತು ಮೀಟರ್ ದೂರದಲ್ಲಿ ಭಾರೀ ವಾಹನ ಒಂದು ಪಲ್ಟಿಯಾಗಿತ್ತು.